
ಕೋವಿಡ್ -19 ಗೆ ಕುರಿತು ಸಾರ್ವಜನಿಕ ಆರೋಗ್ಯ ಪ್ರಕ್ರಿಯೆಯ ಸ್ಥಿತಿಗತಿ ಮತ್ತು ಸನ್ನದ್ಧತೆಯನ್ನು ಪರಿಶೀಲಿಸುವ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಅವರು ವಹಿಸಿದರು
ಕಟ್ಟುನಿಟ್ಟಾದ ಮುಂಜಾಗರೂಕತೆಯನ್ನು ಕಾಪಾಡಿಕೊಳ್ಳಲು ಪ್ರಧಾನಮಂತ್ರಿ ಅವರು ಸಲಹೆ ನೀಡಿದರು
ಜೀನೋಮ್ ಸೀಕ್ವೆನ್ಸಿಂಗ್ ಮತ್ತು ಅಧಿಕ ಸಂಖ್ಯೆಯಲ್ಲಿ ದೈನಂದಿನ ಪರೀಕ್ಷೆಯ ಮೇಲೆ ಕೇಂದ್ರೀಕರಿಸುವ ಮೂಲಕ ಮುನ್ನೆಚ್ಚರಿಕಾ ಅಗತ್ಯ ಕ್ರಮಗಳನ್ನು ನಡೆಸಲು ಪ್ರಧಾನಮಂತ್ರಿ ಅವರು ನಿರ್ದೇಶಿಸಿದರು
ಆಸ್ಪತ್ರೆಯ ಮೂಲಸೌಕರ್ಯಗಳ ಕಾರ್ಯಾಚರಣೆಯ ಸಿದ್ಧತೆಯನ್ನು ಖಚಿತಪಡಿಸಿಕೊಳ್ಳಲು ರಾಜ್ಯಗಳಿಗೆ ಸಲಹೆ ನೀಡಲಾಗಿದೆ
ಮುಖಗವಸು ಧರಿಸುವುದು ಸೇರಿದಂತೆ ಸೂಕ್ತ ಕೋವಿಡ್ ಮುನ್ನೆಚ್ಚರಿಕಾ ನಡವಳಿಕೆಯನ್ನು ಅನುಸರಿಸಲು ಸಲಹೆ ನೀಡಲಾಗಿದೆ
ವಯಸ್ಸಾದ ಹಾಗೂ ಆರೋಗ್ಯ ಸಮಸ್ಯೆ ಇರುವವರಿಗೆ ಮುನ್ನೆಚ್ಚರಿಕಾ ಲಸಿಕೆ ನೀಡಲು ನೀಡಲಾಗಿದೆ
ದೇಶದಲ್ಲಿ ಕೋವಿಡ್ -19 ಪರಿಸ್ಥಿತಿ, ಆರೋಗ್ಯ ಮೂಲಸೌಕರ್ಯ ಮತ್ತು ಲಾಜಿಸ್ಟಿಕ್ಸ್ ನ ಸನ್ನದ್ಧತೆ, ಲಸಿಕೆ ಅಭಿಯಾನದ ಸ್ಥಿತಿಗತಿ , ಹೊಸ ಕೋವಿಡ್ -19 ರೂಪಾಂತರಗಳು, ಆರೋಗ್ಯದ ಪರಿಣಾಮಗಳು ಮತ್ತು ಸಾರ್ವಜನಿಕರ ಆರೋಗ್ಯ ಕಾಳಜಿ ಕುರಿತ ಇಂದು ನಡೆದ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಹಿಸಿದ್ದರು. ಇತ್ತೀಚೆಗೆ ಕೆಲವು ದೇಶಗಳಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಈ ಉನ್ನತ ಮಟ್ಟದ ಪರಿಶೀಲನಾ ಸಭೆಯು ಜರುಗಿತು.
ರಾಷ್ಟ್ರಗಳಲ್ಲಿ ಹೆಚ್ಚುತ್ತಿರುವ ಪ್ರಕರಣಗಳು ಸೇರಿದಂತೆ ಜಾಗತಿಕ ಕೋವಿಡ್-19 ಪರಿಸ್ಥಿತಿಯ ಕುರಿ
ಆರೋಗ್ಯ ಕ್ಷೇತ್ರದ ಮುಂಚೂಣಿಯ ಕಾರ್ಯಕರ್ತರು ಮತ್ತು ಕರೋನಾ ಯೋಧರ ನಿಸ್ವಾರ್ಥ ಸೇವೆಯನ್ನು ಪ್ರಧಾನಮಂತ್ರಿಯವರು