
ಇಂದೋರ್: ಮಧ್ಯಪ್ರದೇಶದ ಗುನಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರ ಕೈಯಿಂದ ಶೌಚಾಲಯ ಶುಚಿಗೊಳಿಸಿರುವ ಘಟನೆ ನಡೆದಿದೆ
ಸ್ಥಳೀಯ ಮಾಧ್ಯಮಗಳಲ್ಲಿ ಈ ಕುರಿತು ವರದಿಯಾಗಿದ್ದು, ಮಧ್ಯಪ್ರದೇಶದ ಸಚಿವ ಮಹೇಂದ್ರ ಸಿಂಗ್ ಸಿಸೋಡಿಯಾ ತನಿಖೆಗೆ ಆದೇಶಿಸಿದ್ದಾರೆ.
ಚಕ್ದೇವ್ಪುರ ಗ್ರಾಮದಲ್ಲಿರುವ ಪ್ರಾಥಮಿಕ, ಮಾಧ್ಯಮಿಕ ಶಾಲೆಯಲ್ಲಿ ಸಮವಸ್ತ್ರ ಧರಿಸಿರುವ ಬಾಲಕಿಯರ ಕೈಯಿಂದ ಶೌಚಾಲಯ ಶುಚಿಗೊಳಿಸಲಾಗಿದೆ.
ಐದನೇ ಹಾಗೂ 6ನೇ ತರಗತಿಯ ವಿದ್ಯಾರ್ಥಿನಿಯರಿಂದ ಶೌಚಾಲಯ ಶುಚಿಗೊಳಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ತಪ್ಪಿತ್ತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದ್ದಾರೆ.
Inf:pvn
Sibin P S