
Revenue Minister R Ashoka Says Rain Cause Extreme Damage In Karnataka State
ಬೆಂಗಳೂರು: ಎರಡು ದಿನಗಳ ಅವಧಿಯಲ್ಲಿ ರಾಜ್ಯದ 20 ಜಿಲ್ಲೆಗಳಲ್ಲಿ ಮಳೆಯಿಂದ ಹೆಚ್ಚು ಹಾನಿಯಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ ತಿಳಿಸಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, 24 ಗಂಟೆಗಳ ಅವಧಿಯಲ್ಲಿ ದಿನಗಳಲ್ಲಿ 184 ಮನೆಗಳು ಕುಸಿದಿವೆ. ಮಳೆಯಿಂದ ಇಬ್ಬರು ಮೃತಪಟ್ಟಿದ್ದಾರೆ. 258 ಜಾನುವಾರುಗಳು ಮೃತಪಟ್ಟಿವೆ ಎಂದರು.
ರಾಜ್ಯದಲ್ಲಿ 27 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ ಬಿದ್ದಿದೆ. ಅತಿವೃಷ್ಟಿ ಮತ್ತು ಪ್ರವಾಹದಿಂದ ₹7,647.13 ಕೋಟಿಯಷ್ಟು ಹಾನಿ ಸಂಭವಿಸಿದೆ ಎಂದು ಹೇಳಿದರು.
ಸೋಮವಾರ ಒಂದೇ ದಿನ 875 ಸಂತ್ರಸ್ತರು ಕಾಳಜಿ ಕೇಂದ್ರಕ್ಕೆ ಸ್ಥಳಾಂತರವಾಗಿದ್ದಾರೆ. ಒಟ್ಟು 9,244 ಸಂತ್ರಸ್ತರು ಕಾಳಜಿ ಕೇಂದ್ರಗಳಲ್ಲಿದ್ದಾರೆ ಎಂದರು.

Sibin P Soman