50 only for the enjoyment of amusement toys at Marikamba fair.
ಸಾಗರ: ಇತಿಹಾಸ ಪ್ರಸಿದ್ಧ ಶ್ರೀ ಮಾರಿಕಾಂಬ ಜಾತ್ರೆಯಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ಗೆ ಶ್ರೀ ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿಯು ನಿರಾಪೇಕ್ಷಣ ಪತ್ರ ನೀಡಿತು. ಅತ್ಯಂತ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಮನೋರಂಜನಾ ಚಟುವಟಿಕೆಗಳ ಸೇವೆ ಒದಗಿಸುವಂತೆ ಸೂಚಿಸಲಾಯಿತು.

ಅಮ್ಯೂಸ್ಮೆಂಟ್ ಮಾಡುವ ಸಂಬಂಧ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿದ್ದು, ಗೌತಮ್ ಎಂಬುವವರಿಗೆ ಟೆಂಡರ್ ನೀಡಲಾಗಿದೆ. ಜಾತ್ರಾ ಸಮಿತಿ ಸೂಚಿಸಿರುವ ಎಲ್ಲ ಷರತ್ತುಗಳನ್ನು ಪಾಲಿಸುವ ಜತೆಯಲ್ಲಿ ಜನರಿಗೆ ಯಾವುದೇ ತೊಂದರೆ ಆಗದಂತೆ ಅಮ್ಯೂಸ್ಮೆಂಟ್ ಸ್ಥಾಪಿಸಲು ಸಮಿತಿ ವತಿಯಿಂದ ತಿಳಿಸಲಾಯಿತು.
ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಶಾಸಕ ಹರತಾಳು ಹಾಲಪ್ಪ ನೇತೃತ್ವದಲ್ಲಿ ಅಧಿಕಾರಿಗಳ ಜತೆ ನಡೆದಿದ್ದ ಪೂರ್ವಸಿದ್ಧತಾ ಸಭೆಯಲ್ಲಿ ಅಮ್ಯೂಸ್ಮೆಂಟ್ ಪಾರ್ಕ್ನಲ್ಲಿ ನಡೆಸುವ ಮನೋರಂಜನಾ ಆಟಿಕೆಗಳಿಗೆ 50 ರೂ. ಅಥವಾ ಕಡಿಮೆ ದರ ನಿಗಧಿಪಡಿಸಬೇಕು. ಯಾವುದೇ ಕಾರಣಕ್ಕೂ ಹೆಚ್ಚಿನ ದರ ನಿಗಧಿಪಡಿಸುವಂತಿಲ್ಲ. ಹೆಚ್ಚಿನ ದರ ಪಡೆದಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಹರತಾಳು ಹಾಲಪ್ಪ ಸಭೆಯಲ್ಲಿ ಸೂಚಿಸಿದ್ದರು.
ಶ್ರೀ ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿ ಅಧ್ಯಕ್ಷ ಕೆ.ಎನ್.ನಾಗೇಂದ್ರ ಮಾತನಾಡಿ, ಅಮ್ಯೂಸ್ಮೆಂಟ್ ಪಾರ್ಕ್ನಲ್ಲಿ ಜಾತ್ರಾ ಸಮಿತಿಯು ಸೂಚಿಸಿರುವ ಎಲ್ಲ ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕರಿಗೆ ಕಡಿಮೆ ದರದಲ್ಲಿ ಮನೋರಂಜನಾ ಚಟುವಟಿಕೆಗಳ ಸೌಲಭ್ಯ ನೀಡಬೇಕು. ಹೆಚ್ಚಿನ ದರ ನಿಗಧಿಪಡಿಸಬಾರದು ಎಂದು ಹೇಳಿದರು.
ವ್ಯವಸ್ಥಾಪಕ ಸಮಿತಿ ಜಾತ್ರೆ ಆಚರಣೆ ಸಂಬಂಧಿಸಿ ಎಲ್ಲ ಸಿದ್ಧತೆ ನಡೆಸಿದ್ದು, ಮಳಿಗೆ ನಿರ್ಮಾಣ ಸೇರಿದಂತೆ ಅಗತ್ಯ ಕಾರ್ಯಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಲಾಗುತ್ತಿದೆ. ಜಾತ್ರೆಯ ಯಶಸ್ಸಿಗೆ ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಶ್ರೀ ಮಾರಿಕಾಂಬಾ ದೇವಸ್ಥಾನಗಳ ವ್ಯವಸ್ಥಾಪಕ ಸಮಿತಿ ಪ್ರಧಾನ ಕಾರ್ಯದರ್ಶಿ ಬಿ.ಗಿರಿಧರರಾವ್, ಉಪಾಧ್ಯಕ್ಷ ಸುಂದರ್ಸಿಂಗ್, ಖಜಾಂಚಿ ನಾಗೇಂದ್ರ ಕುಮಟ, ವಿವಿಧ ಸಮಿತಿಯ ಸಂಚಾಲಕರು, ಸಹ ಸಂಚಾಲಕರು, ಸದಸ್ಯರು ಉಪಸ್ಥಿತರಿದ್ದರು
info :shakthi sagar
Sibin Soman
