
ಮೊದಲ ಬಾರಿಗೆ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿಗಳಾಗಿ ಸಾಗರ ಕ್ಷೇತ್ರಕ್ಕೆ ಆಗಮಿಸಿದ ಶ್ರೀ ಮಧು ಬಂಗಾರಪ್ಪ ನವರಿಗೆ ಸಾಗರ ಕಾಂಗ್ರೆಸ್ ಕಛೇರಿಯಲ್ಲಿ ಹಿರಿಯರಾದ ಶ್ರೀ ಕಾಗೋಡು ತಿಮ್ಮಪ್ಪ ನವರು ,ಶಾಸಕರು ಗೋಪಾಲ ಕೃಷ್ಣ ಬೆಳ್ಳೂರು ಹಾಗೂ ಸಾಗರ ಕಾಂಗ್ರೆಸ್ ಮುಖಂಡರುಗಳ ಉಪಸ್ಥಿತಿಯಲ್ಲಿ ಸಚಿವರಿಗೆ ಸನ್ಮಾನಿಸಲಾಯಿತು. ಸಚಿವರು ಸಾಗರ ತಾಲ್ಲೂಕಿನ ವಿವಿಧ ಇಲಾಖೆಗೆ ಸಂಬಂಧಿಸಿದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಸಾಗರ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
