
IND vs SA Match Highlights: ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಶನಿವಾರ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತ ತಂಡ 7 ವಿಕೆಟ್ಗಳ ರೋಚಕ ಗೆಲುವು ಸಾಧಿಸಿತು. ಆ ಮೂಲಕ 17 ವರ್ಷಗಳ ಬಳಿಕ ಭಾರತ ತಂಡ ಎರಡನೇ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿತು. ಜೊತೆಗೆ 11 ವರ್ಷಗಳ ಬಳಿಕ ಟೀಮ್ ಇಂಡಿಯಾ ಐಸಿಸಿ ಟ್ರೋಫಿಯನ್ನು ಎತ್ತಿ ಹಿಡಿಯಿತು. ಭಾರತ ನೀಡಿದ್ದ 177 ರನ್ಗಳ ಗುರಿ ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ತಂಡ 20 ಓವರ್ಗಳಿಗೆ 8 ವಿಕೆಟ್ ನಷ್ಟಕ್ಕೆ 169 ರನ್ಗಳಿಗೆ ಸೀಮಿತವಾಯಿತು.
ಹೈಲೈಟ್ಸ್:
- 2024ರ ಟಿ20 ವಿಶ್ವಕಪ್ ಫೈನಲ್ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡಕ್ಕೆ 7 ರನ್ ರೋಚಕ ಜಯ.
- ಹದಿನೇಳು ವರ್ಷಗಳ ಬಳಿಕ ಭಾರತ ತಂಡ ಎರಡನೇ ಟಿ20 ವಿಶ್ವಕಪ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ.
- ಭಾರತ ನೀಡಿದ್ದ 177 ರನ್ಗಳ ಗುರಿಯನ್ನು ಹಿಂಬಾಲಿಸಿದ ದಕ್ಷಿಣ ಆಫ್ರಿಕಾ ತಂಡ 169 ರನ್ಗಳಿಗೆ ಸೀಮಿತವಾಯಿತು.
ಬಾರ್ಬಡೋಸ್: ಕೊನೆಯ ಎಸೆತದವರೆಗೂ ತೀವ್ರ ರೋಚಕತೆಯಿಂದ ಕೂಡಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಭಾರತ ತಂಡ 7 ರನ್ಗಳ ರೋಚಕ ಗೆಲುವು ಪಡೆಯಿತು. ಆ ಮೂಲಕ 17 ವರ್ಷಗಳ ಎರಡನೇ ಬಾರಿ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಮುಡಿಗೇರಿಸಿಕೊಂಡಿತು ಹಾಗೂ ಸತತ 11 ವರ್ಷಗಳ ಬಳಿಕ ಭಾರತ ತಂಡ ಐಸಿಸಿ ಟ್ರೋಫಿಗೆ ಮುತ್ತಿಟ್ಟಿತು.
176 ರನ್ಗಳನ್ನು ಕಲೆ ಹಾಕಿದ್ದ ಭಾರತ
ಇದಕ್ಕೂ ಮುನ್ನ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ್ದ ಭಾರತ ತಂಡ, ವಿರಾಟ್ ಕೊಹ್ಲಿ (76 ರನ್) ಹಾಗೂ ಅಕ್ಷರ್ ಪಟೇಲ್ (47 ರನ್) ಅವರ ಬ್ಯಾಟಿಂಗ್ ಬಲದಿಂದ ತನ್ನ ಪಾಲಿನ 20 ಓವರ್ಗಳಿಗೆ 7 ವಿಕೆಟ್ಗಳ ನಷ್ಟಕ್ಕೆ 176 ರನ್ಗಳನ್ನು ಕಲೆ ಹಾಕಿತ್ತು. ಆ ಮೂಲಕ ಎದುರಾಳಿ ದಕ್ಷಿಣ ಆಫ್ರಿಕಾ ತಂಡಕ್ಕೆ 177 ರನ್ಗಳ ಗುರಿಯನ್ನು ನೀಡಿತ್ತು.
ಆರಂಭಿಕ ಆಘಾತ ಅನುಭವಿಸಿದ ಭಾರತ
ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತ್ತು. ಪವರ್ಪ್ಲೇನಲ್ಲಿ ಭಾರತ ತಂಡಕ್ಕೆ ಕೇಶವ್ ಮಹಾರಾಜ್ ಶಾಕ್ ನೀಡಿದರು. ರೋಹಿತ್ ಶರ್ಮಾ (9) ಹಾಗೂ ರಿಷಭ್ ಪಂತ್ ಅವರನ್ನು ಔಟ್ ಮಾಡಿದರು. ನಂತರ ನಾಲ್ಕನೇ ಕ್ರಮಾಂಕದಲ್ಲಿ ಕ್ರೀಸ್ಗೆ ಬಂದಿದ್ದ ಸೂರ್ಯಕುಮಾರ್ ಯಾದವ್ ಅವರನ್ನು ಕಗಿಸೊ ರಬಾಡ ಪ್ಲ್ಯಾನ್ ಮಾಡಿ ವಿಕೆಟ್ ಪಡೆದರು. ಆ ಮೂಲಕ ಟೀಮ್ ಇಂಡಿಯಾ ಕೇವಲ 34 ರನ್ಗಳಿಗೆ ಪ್ರಮುಖ 3 ವಿಕೆಟ್ಗಳನ್ನು ಕಳೆದುಕೊಂಡು ಆರಂಭಿಕ ಆಘಾತಕ್ಕೀಡಾಗಿತ್ತು.
ಕೊಹ್ಲಿ-ಅಕ್ಷರ್ ಪಟೇಲ್ರಿಂದ ನಿರ್ಣಾಯಕ ಜೊತೆಯಾಟ
ಭಾರತ ತಂಡ 34 ರನ್ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ಜೊತೆಯಾದ ವಿರಾಟ್ ಕೊಹ್ಲಿ ಹಾಗೂ ಅಕ್ಷರ್ ಪಟೇಲ್ ಜೋಡಿಯು ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶನ ತೋರಿತು. ಒತ್ತಡವನ್ನು ಮೆಟ್ಟಿ ನಿಲ್ಲುವಲ್ಲಿ ಯಶಸ್ವಿಯಾದ ಈ ಜೋಡಿ ಮುರಿಯದ ನಾಲ್ಕನೇ ವಿಕೆಟ್ಗ 72 ರನ್ಗಳನ್ನು ಕಲೆ ಹಾಕಿತು. ಆ ಮೂಲಕ ಟಿ20 ವಿಶ್ವಕಪ್ ಫೈನಲ್ನಲ್ಲಿ ಯಾವುದೇ ವಿಕೆಟ್ಗೆ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಜೋಡಿ ಎಂಬ ದಾಖಲೆಯನ್ನು ಕೊಹ್ಲಿ-ಅಕ್ಷರ್ ಬರೆದರು.
ವಿರಾಟ್ ಕೊಹ್ಲಿ ಭರ್ಜರಿ ಅರ್ಧಶತಕ
ಕಳೆದ 7 ಇನಿಂಗ್ಸ್ಗಳಲ್ಲಿ ಸತತ ಬ್ಯಾಟಿಂಗ್ ವೈಫಲ್ಯ ಅನುಭವಿಸಿದ್ದ ವಿರಾಟ್ ಕೊಹ್ಲಿ, ನಿರ್ಣಾಯಕ ಫೈನಲ್ ಪಂದ್ಯದಲ್ಲಿ ಫಾರ್ಮ್ಗೆ ಕಮ್ಬ್ಯಾಕ್ ಮಾಡಿದರು. ಪ್ರಮುಖ 3 ವಿಕೆಟ್ಗಳನ್ನು ಕಳೆದಕೊಂಡು ಸಂಕಷ್ಟಕ್ಕೆ ಸಿಲುಕಿದ್ದ ವೇಳೆ ಜವಾಬ್ದಾರಿಯುತ ಬ್ಯಾಟ್ ಮಾಡಿದ ವಿರಾಟ್ ಕೊಹ್ಲಿ ನಿರ್ಣಾಯಕ ಅರ್ಧಶತಕವನ್ನು ಸಿಡಿಸಿದರು. ಎದುರಿಸಿದ 59 ಎಸೆತಗಳಲ್ಲಿ 2 ಸಿಕ್ಸರ್ ಹಾಗೂ 6 ಬೌಂಡರಿಗಳೊಂದಿಗೆ 76 ರನ್ಗಳನ್ನು ಗಳಿಸಿದರು. ಇವರಿಗೆ ದೀರ್ಘಾವಧಿ ಸಾಥ್ ನೀಡಿದ್ದ ಅಕ್ಷರ್ ಪಟೇಲ್, 31 ಎಸೆತಗಳಲ್ಲಿ 4 ಸಿಕ್ಸರ್ ಹಾಗೂ ಒಂದು ಬೌಂಡರಿ ಮೂಲಕ 47 ರನ್ ಗಳಿಸಿ ತಂಡವನ್ನು ಅಪಾಯದಿಂದ ಪಾರು ಮಾಡಿದ್ದರು. ಕೊನೆಯಲ್ಲಿ ಶಿವಂ ದುಬೆ 27 ರನ್ಗಳ ಕೊಡುಗೆ ನೀಡಿದ್ದರು.
inf:VK
